ADVERTISEMENT

ನಂದಗುಡಿ: ಶೌಚಾಲಯಕ್ಕೆ ಪರದಾಟ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2023, 6:04 IST
Last Updated 23 ಏಪ್ರಿಲ್ 2023, 6:04 IST
ನನೆಗುದಿಗೆ ಬಿದ್ದಿರುವ ಶೌಚಾಲಯದ ಕಾಮಗಾರಿ
ನನೆಗುದಿಗೆ ಬಿದ್ದಿರುವ ಶೌಚಾಲಯದ ಕಾಮಗಾರಿ   

ಹೊಸಕೋಟೆ: ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರವಾಗಿರುವ ನಂದಗುಡಿಯಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೆ ಜನರು ಪರದಾಡುವಂತಾಗಿದೆ.

ದೇಶದ ಪ್ರತಿಯೊಂದು ಮನೆಯೂ ಶೌಚಾಲಯವನ್ನು ಹೊಂದಿರಬೇಕು ಎಂಬ ಆಶಯದಂತೆ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅಡಿಯಲ್ಲಿ ನಗರ, ಗ್ರಾಮೀಣ ಭಾಗದ ಪ್ರತಿ ಮನೆಗೂ ಶೌಚಾಲಯ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಆದರೆ, ಹೋಬಳಿ ಕೇಂದ್ರ ಎನಿಸಿಕೊಂಡಿರುವ ನಂದಗುಡಿಯಲ್ಲಿ ಸಾರ್ವಜನಿಕರಿಗೆ ಶೌಚಾಲಯವೇ ಇಲ್ಲದಂತಾಗಿದ್ದು, ಇದರಿಂದ ಮಲ ಮೂತ್ರ ವಿಸರ್ಜನೆಗೆ ಬಯಲೇ ಗತಿ ಎನ್ನುವಂತಾಗಿದೆ.

ಶೌಚಾಲಯ ಕಾಮಗಾರಿ ನನೆಗುದಿಗೆ: ನಂದಗುಡಿ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಹಳೆಯ ಶೌಚಾಲಯ ಕಟ್ಟಡ ಬೀಳಿಸಿ ಅದೇ ಸ್ಥಳದಲ್ಲಿ ಹೊಸ ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಆದರೆ ಕಾಮಗಾರಿ ಅರ್ಧಕ್ಕೆ ಸ್ಥಗಿತವಾಗಿದ್ದು, ಕಾಮಗಾರಿ ನನೆಗುದಿಗೆ ಬಿದ್ದಿದೆ.

ADVERTISEMENT

ವಿದ್ಯಾರ್ಥಿಗಳು, ಪ್ರಯಾಣಿಕರು ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುವಂತೆ ನಂದಗುಡಿಯಲ್ಲಿ ಶೀಘ್ರವಾಗಿ ಶೌಚಾಲಯ ನಿರ್ಮಾಣವಾಗಲಿ ಎಂದು ನಂದಗುಡಿ ಗ್ರಾಮದ ಹರೀಶ್ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.