ಮಧ್ಯಪ್ರದೇಶದ ಇಂದೋರ್‌ನಲ್ಲಿ ಎಂಬಿಎ ವಿದ್ಯಾರ್ಥಿನಿ ಶುಭಿ ಜೈನ್ ಎಂಬುವವರು ಟ್ರಾಫಿಕ್ ಕುರಿತು ವಿಶಿಷ್ಟ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ವಿಭಿನ್ನ ರೀತಿಯ ಆಂಗಿಕ ಸಂಜ್ಞೆಗಳನ್ನು ನೀಡುತ್ತ ಟ್ರಾಫಿಕ್ ನಿಯಮಗಳನ್ನು ಪಾಲಿಸುವಂತೆ ಅವರು ವಾಹನ ಸವಾರರಲ್ಲಿ ಮನವಿ ಮಾಡುತ್ತಿದ್ದಾರೆ. ಸದ್ಯ ಈ ವಿಡಿಯೊ ವೈರಲ್ ಆಗಿದ್ದು, ವಿದ್ಯಾರ್ಥಿನಿ ಶುಭಿ ಜೈನ್ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.