ಸ್ಟಾಕ್‌ಹೋಂ (ಪಿಟಿಐ): ಯುವಜನರು ಮೊಬೈಲ್ ಹಾಗೂ ಕಂಪ್ಯೂಟರ್‌ಗಳನ್ನು ಅತಿಯಾಗಿ ಬಳಸಿದರೆ ನಿದ್ರಾಹೀನತೆ ಹಾಗೂ ಮಾನಸಿಕ ಒತ್ತಡದಿಂದ ಬಳಲಬೇಕಾಗುತ್ತದೆ ಎಂದು ಸಂಶೋಧನೆಯೊಂದು ಎಚ್ಚರಿಕೆ ನೀಡಿದೆ.
ಮೊಬೈಲ್ ಹಾಗೂ ಕಂಪ್ಯೂಟರ್ ಅತಿಬಳಕೆಯಿಂದ ಯುವಜನರ ಮಾನಸಿಕ ಆರೋಗ್ಯದ ಮೇಲೆ ಆಗುವ ಪರಿಣಾಮಗಳನ್ನು ಗುರುತಿಸಲು ಗುಟೆನ್‌ಬರ್ಗ್ ವಿಶ್ವವಿದ್ಯಾಲಯದ ಸಂಶೋಧಕಿ ಸಾರಾ ಥೊಮಿ, ನಾಲ್ಕು ವಿಭಿನ್ನ ರೀತಿಯ ಅಧ್ಯಯನ ನಡೆಸಿದ್ದಾರೆ.
ಇದಕ್ಕಾಗಿ 20 ರಿಂದ 24 ವರ್ಷ ವಯೋಮಾನದ ಸುಮಾರು 4,100 ಮಂದಿಯನ್ನು ಸಮೀಕ್ಷೆಗೊಳಪಡಿಸಲಾಗಿತ್ತು. ಮಾಹಿತಿ ಹಾಗೂ ಸಂವಹನ ತಂತ್ರಜ್ಞಾನದ (ಐಸಿಟಿ) ಅತಿಯಾದ ಬಳಕೆಯು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುತ್ತಾರೆ ಥೊಮಿ.
`ಅತಿಯಾದ ಮೊಬೈಲ್ ಬಳಕೆಯಿಂದ ಪುರುಷರಲ್ಲಿ ನಿದ್ರಾ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಮಹಿಳೆಯರಲ್ಲಿ ಖಿನ್ನತೆಯ ಲಕ್ಷಣಗಳು ಗೋಚರಿಸುತ್ತವೆ. ಸದಾ ಕಂಪ್ಯೂಟರ್ ಮುಂದೆ ಕೂತರೆ ಮಾನಸಿಕ ಒತ್ತಡ ಉಂಟಾಗುತ್ತದೆ~ ಎಂದೂ ಅವರು ಹೇಳುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.