ನ್ಯೂಯಾರ್ಕ್ (ಪಿಟಿಐ): ಗುಜರಾತ್ ಕೋಮು ಗಲಭೆ ನಡೆದು 10 ವರ್ಷ ಸಂದ ಸಂದರ್ಭದಲ್ಲಿ, ಅಮೆರಿಕದ ಸುಮಾರು 40ಕ್ಕೂ ಹೆಚ್ಚಿನ ಭಾರತೀಯ ಸಂಘಟನೆಗಳು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿದವು.
ಮಹಿಳೆಯರು, ಮಕ್ಕಳನ್ನೂ ಒಳಗೊಂಡ ಪ್ರತಿಭಟನಾಕಾರರು ಭಿತ್ತಿಪತ್ರಗಳನ್ನು ಹಿಡಿದು ಮೋದಿ ಹಾಗೂ ಅವರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೋಮು ಗಲಭೆಗೆ ಮೋದಿ ಅವರೇ ಕುಮ್ಮಕ್ಕು ನೀಡಿದ್ದರು ಎಂದು ಆರೋಪಿಸಿದರು. ಅಲ್ಲದೆ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆಯೂ ಆಗ್ರಹಿಸಿ ಮ್ಯಾನ್‌ಹಟನ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.