ADVERTISEMENT

ಅಮೆರಿಕ: ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮೋದಿ ಭಾಷಣ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2013, 19:59 IST
Last Updated 12 ಸೆಪ್ಟೆಂಬರ್ 2013, 19:59 IST

ವಾಷಿಂಗ್ಟ್‌ನ್‌ (ಪಿಟಿಐ): ಮುಂಬ­ರುವ ಲೋಕಸಭಾ ಚುನಾವಣೆಗೆ ಪಕ್ಷಕ್ಕೆ ಬೆಂಬಲ ಕೋರಲು ಗುಜರಾತ್‌ ಮುಖ್ಯ­ಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ­ದಲ್ಲಿ ನೆಲೆಸಿರುವ ಪಕ್ಷದ ಸ್ನೇಹಿತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ವಿದೇಶದಲ್ಲಿ ನೆಲೆಸಿರುವ ಪಕ್ಷದ ಸ್ನೇಹಿತರ ಅಮೆರಿಕಾ ಘಟಕವು ಸೆ. 21ರಂದು ಟಂಪದಲ್ಲಿ ಸಮ್ಮೇಳನ ಆಯೋಜಿಸಿದ್ದು, ಮೋದಿ ಅವರು ಉಪಗ್ರಹದ ಮೂಲಕ ಸಮ್ಮೇಳನ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.