ADVERTISEMENT

ಅಮೆರಿಕ ವಿರುದ್ಧ ಪಾಕ್ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2011, 19:30 IST
Last Updated 23 ಸೆಪ್ಟೆಂಬರ್ 2011, 19:30 IST

ಇಸ್ಲಾಮಾಬಾದ್ (ಪಿಟಿಐ):  ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದೆ ಎಂದು ಅಮೆರಿಕ ಮಾಡಿರುವ ಆರೋಪಕ್ಕೆ ಅಸಮಾಧಾನಗೊಂಡಿರುವ ಪಾಕಿಸ್ತಾನ ಅಮೆರಿಕದ ವಿರುದ್ಧ ವಾಗ್ದಾಳಿ ನಡೆಸಿದೆ.

ಅಮೆರಿಕ ಮಾಡಿರುವ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಪಾಕ್ ವಿದೇಶಾಂಗ ಸಚಿವೆ ಹಿನಾ ರಬ್ಬಾನಿ ಖರ್, ಅಮೆರಿಕವು ಪಾಕಿಸ್ತಾನದ ಜೊತೆಗಿನ ಸಂಬಂಧವನ್ನು ಕಳೆದುಕೊಳ್ಳಬೇಕಾದೀತು ಎಂದು ಎಚ್ಚರಿಸಿದ್ದಾರೆ.

`ನೀವು ಒಂದು ರಾಷ್ಟ್ರದ ಸ್ನೇಹವನ್ನು ಕಳೆದುಕೊಳ್ಳಲಿದ್ದೀರಿ ಎಂದು ನಾವು ಅಮೆರಿಕಕ್ಕೆ ತಿಳಿಸಿದ್ದೇವೆ. ಪಾಕಿಸ್ತಾನದಿಂದ ಪಾಕಿಸ್ತಾನ ನಾಗರಿಕರನ್ನು ಪ್ರತ್ಯೇಕಗೊಳಿಸಲು ನಿಮಗೆ ಸಾಧ್ಯವಿಲ್ಲ~ ಎಂದು ಖರ್ ಹೇಳಿದ್ದಾರೆ.

`ಒಂದು ವೇಳೆ ಅಮೆರಿಕ ಅದಕ್ಕೆ ಯತ್ನಿಸಿದರೆ, ಅವರೇ ಬೆಲೆ ತೆರಬೇಕಾಗುತ್ತದೆ~ ಎಂದೂ ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.