ಕಾಬೂಲ್(ಐಎಎನ್‌ಎಸ್): ಮೈಮನಾ ನಗರದ ಜನತೆ ನವರೋಜ್(ಅಫಘಾನಿಗಳ ಹೊಸ ವರ್ಷ) ಸಂಭ್ರಮದ ಸಿದ್ಧತೆಯಲ್ಲಿದ್ದಾಗ ಉಗ್ರರು ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ, 15 ಜನರನ್ನು ಬಲಿ ತೆಗೆದುಕೊಂಡಿದ್ದಾರೆ.
‘ದಾಳಿಯಲ್ಲಿ 20 ಜನರೂ ಗಾಯಗೊಂಡಿದ್ದಾರೆ’ ಎಂದು ಪ್ರಾಂತ್ಯದ ರಾಜ್ಯಪಾಲ ಮೊಹಮ್ಮದ್ ಅಲ್ಲಾಹ ಬಕ್ತಾಶ್ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸ್ಫೋಟದ ತೀವ್ರತೆಯಿಂದ ಸ್ಥಳದಲ್ಲಿದ್ದ ಅಂಗಡಿಗಳು, ವಾಹನಗಳು ಹಾನಿಗೀಡಾಗಿವೆ. ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.