ADVERTISEMENT

ಇಂದು ಆಸ್ಟ್ರೇಲಿಯಾಕ್ಕೆ ಕೃಷ್ಣ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

​ಪ್ರಜಾವಾಣಿ ವಾರ್ತೆ
Published 18 ಜನವರಿ 2011, 19:30 IST
Last Updated 18 ಜನವರಿ 2011, 19:30 IST

ಮೆಲ್ಬರ್ನ್ (ಪಿಟಿಐ): ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಕೆವಿನ್ ರುಡ್ ಜತೆ ರಚನಾತ್ಮಾಕ ಸಂಬಂಧ ಕುರಿತು ಚರ್ಚೆ ನಡೆಸಲು ಭಾರತದ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಬುಧವಾರ ಮೂರು ದಿನಗಳ ಭೇಟಿಗಾಗಿ ಇಲ್ಲಿಗೆ ಆಗಮಿಸಲಿದ್ದಾರೆ.

ಈ ಭೇಟಿಯ ಸಂದರ್ಭದಲ್ಲಿ ಕೃಷ್ಣ ಅವರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯ ಕುರಿತು ಚರ್ಚೆ ನಡೆಸಲಿದ್ದಾರೆ. ಪ್ರಮುಖವಾಗಿ ಏಷ್ಯಾ ಮತ್ತು ಜಿ20 ರೀತಿಯ ಬಹುಪಕ್ಷೀಯ ಆರ್ಥಿಕ ಸಂಘಟನೆಗಳ ಭದ್ರತೆ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ.

ಆಸ್ಟ್ರೇಲಿಯಾ ಭಾರತಕ್ಕೆ ಯುರೇನಿಯಂ ಪೂರೈಕೆ ಮಾಡುವ ಕುರಿತು ಕೃಷ್ಣ ಅವರು ಆಸ್ಟ್ರೇಲಿಯಾ ಸರ್ಕಾರದ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ. ಅಲ್ಲದೆ ಮುಕ್ತ ಮಾರುಕಟ್ಟೆ ಒಪ್ಪಂದ ಕುರಿತೂ ಚರ್ಚಿಸುವ ಇಂಗಿತ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.