ಇಸ್ಲಾಮಾಬಾದ್ (ಐಎಎನ್‌ಎಸ್): ಸಿಬ್ಬಂದಿ ಸೇರಿ 131 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಶುಕ್ರವಾರ ಸಂಜೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಪಘಾತಕ್ಕೀಡಾಗಿದ್ದು, 118 ಮಂದಿ ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಕರಾಚಿಯನ್ನು 5 ಗಂಟೆಗೆ ಬಿಟ್ಟ ಬೊಯಿಂಗ್ 737 ವಿಮಾನ ರಾಜಧಾನಿ ಇಸ್ಲಾಮಾಬಾದ್‌ನ್ನು 640ಕ್ಕೆ ತಲುಪಬೇಕಿತ್ತು. ಆದರೆ ಮಾರ್ಗ ಮಧ್ಯೆ ರಾವಲ್ಪಿಂಡಿ ಬಳಿ ಅಪಘಾತಕ್ಕೀಡಾಗಿದೆ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರವು ತಿಳಿಸಿದೆ.
ವಿಮಾನದ ಅವಶೇಷಗಳು ಮನೆಗಳ ಮೇಲೆ ಬಿದ್ದ ಪರಿಣಾಮ ಬೆಂಕಿ ಕೂಡ ಕಾಣಿಸಿಕೊಂಡಿದೆ ಎಂದು ಸ್ಥಳಿಯ ಮಾಧ್ಯಮಗಳು ವರದಿ ಮಾಡಿವೆ.
ವಿಮಾನದಲ್ಲಿದ್ದ ಯಾರೊಬ್ಬರೂ ಬದುಕುಳಿದ ಬಗ್ಗೆ ಮಾಹಿತಿ ಇಲ್ಲ ಎಂದು ವರದಿಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ರಕ್ಷಣಾ ತಂಡವು ತಲುಪಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.