ವಾಷಿಂಗ್ಟನ್ (ಪಿಟಿಐ): ಅಲ್‌ಖೈದಾ ಉಗ್ರರು 9/11ರ ಭಯೋತ್ಪಾದನಾ ದಾಳಿಯ 10ನೇ ವರ್ಷಾಚರಣೆ ಸಂದರ್ಭದಲ್ಲಿ ಕಾರು ಅಥವಾ ಟ್ರಕ್ ಬಾಂಬ್ ಬಳಸಿ ಮತ್ತೆ ದಾಳಿ ನಡೆಸಬಹುದೆಂಬ ಅಮೆರಿಕ ಗುಪ್ತದಳ ಅಧಿಕಾರಿಗಳ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ ಭಯೋತ್ಪಾದಕ ನಿಗ್ರಹ ಪಡೆಗಳನ್ನು ಇಲ್ಲಿ ನಿಯೋಜಿಸಲಾಗಿದೆ.
ಅಧಿಕಾರಿಗಳು ಅಧ್ಯಕ್ಷ ಒಬಾಮಗೆ ಪರಿಸ್ಥಿತಿಯನ್ನು ವಿವರಿಸಿದ ನಂತರ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಹಾಕಲಾಗಿದೆ. ನ್ಯೂಯಾರ್ಕ್ ಮೇಯರ್ ಮೈಕೆಲ್ ಬ್ಲೂಂಬರ್ಗ್ ಉಗ್ರರ ಬೆದರಿಕೆಯನ್ನು ಬಹಿರಂಗಪಡಿಸಿದ್ದು, ಆದರೆ ಯಾವುದೇ ಸ್ಪಷ್ಟ ಸುಳಿವು ಸಿಕ್ಕಿರುವುದನ್ನು ಖಚಿತಪಡಿಸಿಲ್ಲ. 4ವಿವರ ಪುಟ 10
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.