ADVERTISEMENT

ಉತ್ತರ ಕೊರಿಯಾ ಅಣ್ವಸ್ತ್ರ ಪರೀಕ್ಷೆ ತನಿಖೆಗೆ ನಿರ್ಮಲಾ ಆಗ್ರಹ

ಪಿಟಿಐ
Published 24 ಅಕ್ಟೋಬರ್ 2017, 19:30 IST
Last Updated 24 ಅಕ್ಟೋಬರ್ 2017, 19:30 IST
ಆಸಿಯಾನ್ ರಕ್ಷಣಾ ಸಚಿವರ ಸಭೆಯಲ್ಲಿ ಅಲ್ಲಿನ ರಕ್ಷಣಾ ಕಾರ್ಯದರ್ಶಿ ಡೆಲ್ಫಿನ್ ಲಾರೆಂಜಾನಾ ಅವರೊಂದಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಂಡಿದ್ದರು –ಪಿಟಿಐ ಚಿತ್ರ
ಆಸಿಯಾನ್ ರಕ್ಷಣಾ ಸಚಿವರ ಸಭೆಯಲ್ಲಿ ಅಲ್ಲಿನ ರಕ್ಷಣಾ ಕಾರ್ಯದರ್ಶಿ ಡೆಲ್ಫಿನ್ ಲಾರೆಂಜಾನಾ ಅವರೊಂದಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಂಡಿದ್ದರು –ಪಿಟಿಐ ಚಿತ್ರ   

ಮನಿಲಾ (ಪಿಟಿಐ): ಉತ್ತರ ಕೊರಿಯಾ ನಡೆಸುತ್ತಿರುವ ಅಣ್ವಸ್ತ್ರ, ಕ್ಷಿಪಣಿ ಪರೀಕ್ಷೆಗಳ ಕುರಿತು ತನಿಖೆ ಆಗಬೇಕು ಮತ್ತು ಇದಕ್ಕೆ ಬೆಂಬಲ ನೀಡುತ್ತಿರುವವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ್ದಾರೆ.

ಈ ಮೂಲಕ, ಉತ್ತರ ಕೊರಿಯಾಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನ ಕುರಿತು ಪರೋಕ್ಷವಾಗಿ
ಉಲ್ಲೇಖಿಸಿದ್ದಾರೆ. ಉತ್ತರ ಕೊರಿಯಾ ನಡೆಸುತ್ತಿರುವ ಅಣ್ವಸ್ತ್ರ ಹಾಗೂ ಕ್ಷಿಪಣಿ ಪರೀಕ್ಷೆಗಳು ಅಂತರರಾಷ್ಟ್ರೀಯ ನಿಯಮಾವಳಿಗಳ ಉಲ್ಲಂಘನೆ ಆಗಿದೆ. ಇದು ಕಳವಳಕಾರಿ ಎಂದು ಅವರು ಹೇಳಿದ್ದಾರೆ.

ಫಿಲಿಪ್ಪೀನ್ಸ್‌ನಲ್ಲಿ ನಾಲ್ಕನೇ ಆಸಿಯಾನ್ ರಕ್ಷಣಾ ಸಚಿವರ ಸಭೆ ಉದ್ದೇಶಿಸಿ ಮಾತನಾಡಿದ ವೇಳೆ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.