ವಿಶ್ವಸಂಸ್ಥೆ (ಎಪಿ): ದಕ್ಷಿಣ ಕೊರಿಯಾ ಸರ್ಕಾರವನ್ನು ಅಸ್ತಿರಗೊಳಿಸುವ ಉತ್ತರ ಕೊರಿಯಾದ ಪರಮಾಣು ಅಧಾರಿತ ಕಾರ್ಯಕ್ರಮಗಳನ್ನು ಟೀಕಿಸಿರುವ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಬಾನ್ ಕಿ-ಮೂನ್, ಮುಂದೆ ಮತ್ತಷ್ಟು ಪ್ರಚೋದನಾತ್ಮಕ ಕ್ರಮಗಳನ್ನು ಕೈಗೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.
ಅಣ್ವಸ್ತ್ರ ಹಾಗೂ ಕ್ಷಿಪಣಿ ಕಾರ್ಯಕ್ರಮಗಳನ್ನು ಕೈಬಿಟ್ಟು, ಭದ್ರತಾ ಮಂಡಳಿ ನೀಡುತ್ತಿರುವ ಸೂಚನೆಗಳನ್ನು ಪಾಲಿಸಬೇಕೆಂದು ಅವರು ಉತ್ತರ ಕೊರಿಯಾಕ್ಕೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.