ADVERTISEMENT

ಎನ್‌ಆರ್‌ಐಗಳಿಗೆ ನೆರವು: ಕೃಷ್ಣ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2012, 19:30 IST
Last Updated 3 ಮಾರ್ಚ್ 2012, 19:30 IST

 ಕೈರೊ (ಐಎಎನ್‌ಎಸ್): ವಲಸಿಗರ ವೀಸಾ ಸಮಸ್ಯೆ ಎದುರಿಸುತ್ತಿರುವ ಅನಿವಾಸಿ ಭಾರತೀಯರಿಗೆ ನೆರವು ನೀಡುವಂತೆ ವಿದೇಶಾಂಗ ವ್ಯವಹಾರ ಸಚಿವ ಎಸ್.ಎಂ.ಕೃಷ್ಣ ಅವರು  ಶನಿವಾರ  ಪಶ್ಚಿಮ ಹಾಗೂ ಉತ್ತರ ಆಫ್ರಿಕಾ ದೇಶಗಳ ಭಾರತೀಯ ರಾಯಭಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೈರೊಗೆ ಮೂರು ದಿನಗಳ ಭೇಟಿಯಲ್ಲಿರುವ ಕೃಷ್ಣ, ಅನಿವಾಸಿ ಭಾರತೀಯರ ಸಮಸ್ಯೆಗಳಿಗೆ ಸ್ಪಂದಿಸಲು ಹೊಸ ಕಾರ್ಯತಂತ್ರವನ್ನು ರೂಪಿಸುವಂತೆಯೂ ರಾಯಭಾರಿಗಳಿಗೆ ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.