ADVERTISEMENT

ಎಫ್‌ಡಿಐ: ಭಾರತದ ನಿರ್ಣಯಕ್ಕೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2012, 22:00 IST
Last Updated 8 ಡಿಸೆಂಬರ್ 2012, 22:00 IST

ವಾಷಿಂಗ್ಟನ್ (ಪಿಟಿಐ): ಬಹುಬ್ರಾಂಡ್ ಚಿಲ್ಲರೆ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ (ಎಫ್‌ಡಿಐ) ಅವಕಾಶ ನೀಡುವ ಸಂಬಂಧ ಭಾರತದ ಸಂಸತ್ತು ಕೈಗೊಂಡಿರುವ ನಿರ್ಧಾರವನ್ನು ಅಮೆರಿಕ ಸ್ವಾಗತಿಸಿದೆ.

ಭಾರತದ ಈ ನಿರ್ಧಾರವು ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಹಕಾರವನ್ನು ಮತ್ತಷ್ಟು ಬಲಗೊಳಿಸಲಿದೆ ಎಂದು ಅಮೆರಿಕ ಬಣ್ಣಿಸಿದೆ.
`ಭಾರತದ ಸಂಸತ್ತಿನ ನಿರ್ಧಾರವನ್ನು ನಾವು ಸ್ವಾಗತ್ತೀಸುತ್ತೇವೆ' ಎಂದು ವಿದೇಶಾಂಗ ಇಲಾಖೆ ವಕ್ತಾರ ಮಾರ್ಕ್ ಟೋನರ್ ಹೇಳಿದ್ದಾರೆ.

`ಭಾರತೀಯ ಅಧಿಕಾರಿಗಳು ಹೇಳಿರುವಂತೆ ಎಫ್‌ಡಿಐಯು ಸಣ್ಣ ಉದ್ಯಮಕ್ಕೆ, ರೈತರಿಗೆ ಹೆಚ್ಚು ಅವಕಾಶ ಕಲ್ಪಿಸಲಿದೆ. ಮೂಲ ಸೌಕರ್ಯ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಮತ್ತಷ್ಟು ಉತ್ತೇಜನ ನೀಡಲಿದೆ. ಗ್ರಾಹಕರಿಗೂ ಇದರಿಂದ ಪ್ರಯೋಜನವಾಗಲಿದೆ. ಆಹಾರ ಪದಾರ್ಥಗಳು ಬೆಲೆಯೂ ಇಳಿಯಲಿದೆ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.