ADVERTISEMENT

ಐಎಂಎಫ್ ಸಭೆ: ಅಮೆರಿಕಕ್ಕೆ ಪ್ರಣಬ್

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2012, 19:30 IST
Last Updated 18 ಏಪ್ರಿಲ್ 2012, 19:30 IST

ವಾಷಿಂಗ್ಟನ್ (ಪಿಟಿಐ): ಐಎಂಎಎಫ್ ಹಾಗೂ ವಿಶ್ವಬ್ಯಾಂಕಿನ ವಾರ್ಷಿಕ  ಸಭೆಯಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರು ನಾಲ್ಕು ದಿನಗಳ ಭೇಟಿಗಾಗಿ ಅಮೆರಿಕಕ್ಕೆ ಆಗಮಿಸಿದ್ದಾರೆ.

 ಜಾಗತಿಕ ಅರ್ಥವ್ಯವಸ್ಥೆ ಮತ್ತು ಅಂತರರಾಷ್ಟ್ರೀಯ ಹಣಕಾಸು ಪರಿಸ್ಥಿತಿ ಕುರಿತು ಚರ್ಚೆಯೇ ಅವರ ಭೇಟಿಯ ಸಂದರ್ಭದಲ್ಲಿ ಪ್ರಮುಖ ವಿಷಯವಾಗಲಿದೆ.

 ಈ ಸಭೆ ಹೊರತಾಗಿ, ಮುಖರ್ಜಿ ಅವರು ಜಿ-20, ಜಿ-24 ಮತ್ತು ಬ್ರಿಕ್ಸ್ ರಾಷ್ಟ್ರಗಳ ಸಭೆಯಲ್ಲೂ ಭಾಗವಹಿಸಲಿದ್ದಾರೆ. ಜೊತೆಗೆ ವಿಶ್ವದ ವಿವಿಧ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನೂ ನಡೆಸಲಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.