ADVERTISEMENT

ಐವರು ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2012, 19:30 IST
Last Updated 10 ಅಕ್ಟೋಬರ್ 2012, 19:30 IST

ಇಸ್ಲಾಮಾಬಾದ್(ಪಿಟಿಐ):  ಅಮೆರಿಕದ ಡ್ರೋಣ್ ದಾಳಿಗೆ ಐವರು ಉಗ್ರಗಾಮಿಗಳು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಉತ್ತರ ವಜಿರಿಸ್ತಾನದ ಹಿಂಸಾ ಪೀಡಿತ ವಾಯವ್ಯ ಪಾಕಿಸ್ತಾನದಲ್ಲಿ ಬುಧವಾರ ನಡೆದಿದೆ.

ವಜಿರಿಸ್ತಾನದ ಪ್ರಮುಖ ಪಟ್ಟಣ ಮಿರನ್‌ಶಾ ಪ್ರದೇಶದ ಮೇಲೆ ಒಟ್ಟು ಐದು ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.