ADVERTISEMENT

ಕಾಬೂಲ್‌ನಲ್ಲಿ ಆತ್ಮಾಹುತಿ ದಾಳಿ: 13 ಸಾವು

ಏಜೆನ್ಸೀಸ್
Published 11 ಜೂನ್ 2018, 19:30 IST
Last Updated 11 ಜೂನ್ 2018, 19:30 IST
ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು.
ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು.   

ಕಾಬೂಲ್(ಎಎಫ್‌ಪಿ): ಅಪ್ಗಾನಿಸ್ಥಾನದ ಕಾಬೂಲ್‌ನಲ್ಲಿ ಸೋಮವಾರ ನಡೆದ ಆತ್ಮಾಹುತಿ ಬಾಂಬ್‌ದಾಳಿಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದಾರೆ.

ಸರ್ಕಾರಿ ನೌಕರರು ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದಾಗ ಗ್ರಾಮೀಣ ಪುನರ್‌ವಸತಿ ಮತ್ತು ಅಭಿವೃದ್ಧಿ ಕಚೇರಿಯ ದ್ವಾರದ ಬಳಿ ದಾಳಿ ನಡೆದಿದ್ದು, ಇದರ ಹಿಂದೆ ಐಎಸ್‌ ಸಂಘಟನೆಯ ಕೈವಾಡ ಇರಬಹುದು ಎಂದು ಶಂಕಿಸಲಾಗಿದೆ. ಆದರೆ, ಇದುವರೆಗೆ ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ರಮ್ಜಾನ್‌ ಇರುವ ಕಾರಣ ನೌಕರರು ಬೇಗನೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಸಜ್ಜಾಗಿದ್ದರು. ಆ ಸಂದರ್ಭದಲ್ಲಿ ದಾಳಿ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.