ನೈರೋಬಿ(ಪಿಟಿಐ): ಉತ್ತರ ಈಶಾನ್ಯ ಕಿನ್ಯಾದಲ್ಲಿನ ಅತಿಥಿ ಗೃಹವೊಂದರ ಮೇಲೆ ಮಂಗಳವಾರ ಬಾಂಬ್ ದಾಳಿ ನಡೆದಿದ್ದು, 12 ಮಂದಿ ಸಾವಿಗೀಡಾಗಿದ್ದಾರೆ.
ಘಟನಾ ಸ್ಥಳದಲ್ಲಿ 12 ಮೃತದೇಹಗಳು ದೊರಕಿದ್ದು, ಶೋಧ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದನೆ ನಿಗ್ರಹ ದಳ ಹಾಗೂ ಶ್ವಾನ ದಳ ದಾಳಿಕೋರರಿಗಾಗಿ ಶೋಧ ಕಾರ್ಯ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.