ADVERTISEMENT

ಕುಲಭೂಷಣ್ ಜಾದವ್ ಭೇಟಿಗೆ ಪತ್ನಿಗೆ ಅವಕಾಶ

ಪಿಟಿಐ
Published 11 ನವೆಂಬರ್ 2017, 14:32 IST
Last Updated 11 ನವೆಂಬರ್ 2017, 14:32 IST
ಕುಲಭೂಷಣ್ ಜಾದವ್ ಭೇಟಿಗೆ ಪತ್ನಿಗೆ ಅವಕಾಶ
ಕುಲಭೂಷಣ್ ಜಾದವ್ ಭೇಟಿಗೆ ಪತ್ನಿಗೆ ಅವಕಾಶ   

ಇಸ್ಲಮಾಬಾದ್ (ಪಿಟಿಐ): ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಭಾರತೀಯ ಕುಲಭೂಷನ್ ಜಾಧವ್ ಅವರನ್ನು ಭೇಟಿ ಮಾಡಲು ಅವರ ಪತ್ನಿಗೆ ಅವಕಾಶ ನೀಡುವುದಾಗಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿದೆ.

‘ಕುಲಭೂಷನ್ ಜಾಧವ್ ಅವರನ್ನು, ಅವರ ಪತ್ನಿ ಪಾಕಿಸ್ತಾನದ ನೆಲದಲ್ಲೇ ಭೇಟಿ ಮಾಡಲು ಅವಕಾಶ ಮಾಡಿಕೊಡಲು ನಮ್ಮ ಸರ್ಕಾರ ನಿರ್ಧರಿಸಿದೆ. ಮಾನವೀಯತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಇಸ್ಲಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಪತ್ರ ಬರೆಯಲಾಗಿದೆ’ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

‘ಜಾಧವ್ ಅವರನ್ನು ಭೇಟಿ ಮಾಡಲು ಅವರ ತಾಯಿಗೆ ಅವಕಾಶ ಮಾಡಿಕೊಡಿ ಎಂದು ಭಾರತ ಸರ್ಕಾರ ಹಲವು ಬಾರಿ ಮನವಿ ಸಲ್ಲಿಸಿತ್ತು. ಆದರೆ ಪಾಕಿಸ್ತಾನವು ಮನವಿಯನ್ನು ತಿರಸ್ಕರಿಸಿತ್ತು. ಆದರೆ ಈಗ ಈ ನಿರ್ಧಾರಕ್ಕೆ ಬರಲು ಕಾರಣ ಏನು ಎಂಬುದು ಬಹಿರಂಗವಾಗಿಲ್ಲ’ ಎಂದು ದಿ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ADVERTISEMENT

ಗೂಢಚರ್ಯೆ ನಡೆಸಿದ ಆರೋಪದಲ್ಲಿ ಭಾರತೀಯ ನೌಕಾಪಡೆಯ ನಿವೃತ್ತ ಕಮಾಂಡರ್ ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನ ಸೇನೆ ಬಂಧಿಸಿತ್ತು. ಜಾಧವ್ ಅವರಿಗೆ ಅಲ್ಲಿನ ಸೇನಾ ನ್ಯಾಯಾಲಯ ಕಳೆದ ಏಪ್ರಿಲ್‌ನಲ್ಲಿ ಮರಣ ದಂಡನೆ ಪ್ರಕಟಿಸಿತ್ತು. ಅಂತರರಾಷ್ಟ್ರೀಯ ನ್ಯಾಯಾಲಯವು ಶಿಕ್ಷೆ ಜಾರಿ ಮಾಡದಂತೆ ಪಾಕಿಸ್ತಾನಕ್ಕೆ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.