ADVERTISEMENT

ಕ್ಷಮೆ ಕೋರಿದ ಜುಕರ್‌ಬರ್ಗ್‌

ಪಿಟಿಐ
Published 22 ಮಾರ್ಚ್ 2018, 19:40 IST
Last Updated 22 ಮಾರ್ಚ್ 2018, 19:40 IST
ಕ್ಷಮೆ ಕೋರಿದ ಜುಕರ್‌ಬರ್ಗ್‌
ಕ್ಷಮೆ ಕೋರಿದ ಜುಕರ್‌ಬರ್ಗ್‌   

ವಾಷಿಂಗ್ಟನ್‌: ಭಾರತದಂತಹ ದೇಶಗಳಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಮಹತ್ವದ ಚುನಾವಣೆಗಳಲ್ಲಿ ಫೇಸ್‌ಬುಕ್‌ ದುರ್ಬಳಕೆ ಆಗದಂತೆ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲಾಗಿದೆ ಎಂದು ಫೇಸ್‌ಬುಕ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾರ್ಕ್‌ ಜುಕರ್‌ಬರ್ಗ್‌ ಭರವಸೆ ನೀಡಿದ್ದಾರೆ.

ಮಾಹಿತಿ ಸೋರಿಕೆಯ ವಿಚಾರದಲ್ಲಿ ತಮ್ಮಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿರುವ ಅವರು ಬಳಕೆದಾರರ ಕ್ಷಮೆ ಯಾಚಿಸಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿ ಅಮೆರಿಕ ಸಂಸತ್ತಿನ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧ ಎಂದಿದ್ದಾರೆ. ಇಂತಹುದು ಇನ್ನೊಮ್ಮೆ ಆಗದಂತೆ ನೋಡಿಕೊಳ್ಳುವುದು ತಮ್ಮ ಜವಾಬ್ದಾರಿ ಎಂದೂ ಅವರು ತಿಳಿಸಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ ಅವರ ಪರವಾಗಿ ಬ್ರಿಟನ್‌ನ ಕೇಂಬ್ರಿಜ್‌ ಅನಲಿಟಿಕಾ ಕಂಪೆನಿಯು ಫೇಸ್‌ಬುಕ್‌ ಮೂಲಕ ಮಾಹಿತಿ ಸೋರಿಕೆ ಮಾಡಿದೆ ಎಂಬ ಆರೋಪದಿಂದಾಗಿ ಜುಕರ್‌ಬರ್ಗ್‌ ಈ ಭರವಸೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.