ADVERTISEMENT

ಗಿಲಾನಿಗೆ ಸಾಂಕೇತಿಕ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2012, 8:45 IST
Last Updated 26 ಏಪ್ರಿಲ್ 2012, 8:45 IST

ಇಸ್ಲಾಮಾಬಾದ್ (ಪಿಟಿಐ): ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಯೂಸುಫ್ ರಜಾ ಗಿಲಾನಿ ಅವರನ್ನು ದೋಷಿ ಎಂದಿರುವ ಪಾಕಿಸ್ತಾನದ ಸುಪ್ರೀಂಕೋರ್ಟ್ ಗುರುವಾರ ಅವರಿಗೆ ಸಾಂಕೇತಿಕ ಶಿಕ್ಷೆ ವಿಧಿಸಿತು.

7 ಜನ ನ್ಯಾಯಮೂರ್ತಿಗಳಿದ್ದ ನ್ಯಾಯಪೀಠ ಗಿಲಾನಿ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪಿತ್ತು ಅವರಿಗೆ 30 ಸೆಕೆಂಡ್‌ಗಳ ಸಾಂಕೇತಿಕ ಶಿಕ್ಷೆ ವಿಧಿಸಿತು.

ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಗಿಲಾನಿ ಅವರು ತೀರ್ಪು ಸಮರ್ಪಕ ಎಂದು ಟೀಕಿಸಿದ್ದಾರೆ.

ಆದೇಶವನ್ನು ಪುನರ್ ಪರಿಶೀಲಿಸುವಂತೆ ಸರ್ಕಾರವು ಸುಪ್ರೀಂಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸುವುದಾಗಿ ಸುದ್ದಿ ಮತ್ತು ಪ್ರಸಾರ ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.