ಇಸ್ಲಾಮಾಬಾದ್ (ಐಎಎನ್‌ಎಸ್): ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪ್ರಧಾನಿ ಯೂಸುಫ್ ರಜಾ ಗಿಲಾನಿ ಅವರ ವಿರುದ್ಧ ದಾಖಲಾಗಿರುವ ಮೊಕದ್ದಮೆಯ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಪ್ರಕಟಿಸಲಿದೆ.
ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಮರುತನಿಖೆ ನಡೆಸುವಂತೆ `ಸ್ವಿಸ್~ ಸರ್ಕಾರಕ್ಕೆ ಪತ್ರ ಬರೆಯದೇ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಗಿಲಾನಿ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ನ್ಯಾಯಮೂರ್ತಿ ನಾಸಿರ್ ಉಲ್ ಮುಲ್ಕ್ ಅವರ ನೇತೃತ್ವದ ಏಳು ಸದಸ್ಯರ ವಿಶೇಷ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.