ಹ್ಯೂಸ್ಟನ್ (ಪಿಟಿಐ): ಒಕ್ಲಾಹಾಮ ಮತ್ತು ನೆರೆಯ ನಗರಗಳ ಮೇಲೆ ಚಂಡಮಾರುತದ ಅಬ್ಬರ ಮುಂದುವರಿದಿದ್ದು, ಸತ್ತವರ ಸಂಖ್ಯೆ 12ಕ್ಕೆ ಏರಿದೆ.
ಚಂಡಮಾರುತದಿಂದಾಗಿ ಒಕ್ಲೊಹಾಮ ನಗರದಲ್ಲಿ ಪ್ರವಾಹ ಉಂಟಾಗಿದೆ. ಒಕ್ಲಾಹಾಮ ವೈದ್ಯಕೀಯ ಪರೀಕ್ಷಕರ ಕಚೇರಿಯ ಅಧಿಕಾರಿಗಳು ಚಂಡಮಾರುತಕ್ಕೆ ಒಂಬತ್ತು ಮಂದಿ ಬಲಿಯಾಗಿರುವುದನ್ನು ದೃಢಪಡಿಸಿದ್ದಾರೆ.
ಮಿಸ್ಸೌರಿಯ ಅಧಿಕಾರಿಗಳು ಮೂವರು ಸಾವನ್ನಪ್ಪಿರುವುದಾಗಿ ಖಚಿತಪಡಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.