ಬೀಜಿಂಗ್ (ಐಎಎನ್‌ಎಸ್) ಚೀನಾದ ಮಿಶಾಜಿ ಪಟ್ಟದಲ್ಲಿನ ಪೌಲ್ಟ್ರಿ ಫಾರಂವೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 93 ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಪೌಲ್ಟ್ರಿ ಫಾರಂನಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಮಿಶಾಜಿ ಪಟ್ಟಣದ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೌಲ್ಟ್ರಿ ಫಾರಂನಲ್ಲಿ ಸುಮಾರು 300 ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಬೆಂಕಿ ಅನಾಹುತಕ್ಕೆ ನಿಖರ ಕಾರಣವೇನೆಂಬುದು ತಿಳಿದುಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.