ADVERTISEMENT

ಚೀನಾದಲ್ಲಿ ಭೂಕಂಪ: 54 ಸಾವು

​ಪ್ರಜಾವಾಣಿ ವಾರ್ತೆ
Published 22 ಜುಲೈ 2013, 10:35 IST
Last Updated 22 ಜುಲೈ 2013, 10:35 IST

ಬೀಜಿಂಗ್ (ಪಿಟಿಐ): ಚೀನಾದ ಗ್ಯಾಂಸೂ ಪ್ರಾಂತ್ಯದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೂಕಂಪನದಲ್ಲಿ ಸುಮಾರು 54 ಜನರು ಮೃತಪಟ್ಟಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ.

ಬೀಜಿಂಗ್‌ನ ನೈಋತ್ಯಕ್ಕಿರುವ ಗ್ಯಾಂಸೂ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ 7.45ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.6 ರಷ್ಟು ತೀವ್ರತೆಯ ಕಂಪನ ದಾಖಲಾಗಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ 54 ಜನರು ಮೃತಪಟ್ಟಿದ್ದು ಸಾವಿರಾರು ಜನರು ಗಾಯಗೊಂಡಿದ್ದಾರೆ. ಸುಮಾರು 21 ಸಾವಿರ ಮನೆಗಳಿಗೆ ಹಾನಿಯಾಗಿದೆ ಎಂದು ಚೀನಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದ್ದು ಕಟ್ಟಡಗಳ ಅವಶೇಷಗಳಡಿ ಬದುಕುಳಿದವರನ್ನು ಹೊರತೆಗೆಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.