ADVERTISEMENT

ಜರ್ದಾರಿ ಅಧ್ಯಕ್ಷರಾಗಿರುವ ತನಕ ಕ್ರಮ ಇಲ್ಲ- ಗಿಲಾನಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2012, 19:30 IST
Last Updated 21 ಮಾರ್ಚ್ 2012, 19:30 IST

ಇಸ್ಲಾಮಾಬಾದ್ (ಐಎಎನ್‌ಎಸ್): ಆಸಿಫ್ ಅಲಿ ಜರ್ದಾರಿ ಪಾಕಿಸ್ತಾನದ ಅಧ್ಯಕ್ಷರಾಗಿರುವ ತನಕ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಿಟ್ಜರ್‌ಲೆಂಡ್ ಅಧಿಕಾರಿಗಳಿಗೆ ಪತ್ರ ಬರೆಯುವುದಿಲ್ಲ ಎಂದು ನ್ಯಾಯಾಂಗ ನಿಂದನೆ ಸಂಬಂಧ ಬುಧವಾರ ಪ್ರಧಾನಿ ಯೂಸುಫ್ ರಜಾ ಗಿಲಾನಿ ಅವರ ಪರವಾಗಿ ವಕೀಲ ಐತ್‌ಜಾಜ್ ಎಹಸಾನ್ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ಜ. 16ರಂದು ಗಿಲಾನಿ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಿತ್ತು. ಗಿಲಾನಿ ಕೋರ್ಟ್‌ಗೆ ಹಾಜರಾಗಿ, ಭ್ರಷ್ಟಾಚಾರ ಪ್ರಕರಣದಲ್ಲಿ  ಜರ್ದಾರಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗದು,  ಏಕೆಂದರೆ ಸಂವಿಧಾನದಲ್ಲಿ ಅಧ್ಯಕ್ಷರಿಗೆ ವಿನಾಯಿತಿ ನೀಡಲಾಗಿದೆ ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.