ADVERTISEMENT

ಜೆರುಸಲೇಂ ಇಸ್ರೇಲ್‌ ರಾಜಧಾನಿ: ಟ್ರಂಪ್ ಘೋಷಣೆ

ಏಜೆನ್ಸೀಸ್
Published 7 ಡಿಸೆಂಬರ್ 2017, 10:55 IST
Last Updated 7 ಡಿಸೆಂಬರ್ 2017, 10:55 IST
ಜೆರುಸಲೇಂ ಅನ್ನು ಇಸ್ರೇಲ್‌ ರಾಜಧಾನಿಯನ್ನಾಗಿ ಮಾನ್ಯ ಮಾಡಿದ ಆದೇಶದ ಪ್ರತಿಯನ್ನು ಪ್ರದರ್ಶಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ – ರಾಯಿಟರ್ಸ್‌ ಚಿತ್ರ
ಜೆರುಸಲೇಂ ಅನ್ನು ಇಸ್ರೇಲ್‌ ರಾಜಧಾನಿಯನ್ನಾಗಿ ಮಾನ್ಯ ಮಾಡಿದ ಆದೇಶದ ಪ್ರತಿಯನ್ನು ಪ್ರದರ್ಶಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ – ರಾಯಿಟರ್ಸ್‌ ಚಿತ್ರ   

ವಾಷಿಂಗ್ಟನ್: ತೀವ್ರ ವಿರೋಧದ ನಡುವೆಯೂ ಜೆರುಸಲೇಂ ಇಸ್ರೇಲ್‌ ರಾಜಧಾನಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಜೆರುಸಲೇಂ ಅನ್ನು ಇಸ್ರೇಲ್‌ನ ರಾಜಧಾನಿಯನ್ನಾಗಿ ಮಾನ್ಯ ಮಾಡಿ, ಅಮೆರಿಕದ ರಾಯಭಾರ ಕಚೇರಿಯನ್ನು ಟೆಲ್‍ಅವಿವ್‍ನಿಂದ ಜೆರುಸಲೆಂಗೆ ಸ್ಥಳಾಂತರಿಸಲು ಇಸ್ರೇಲ್‌ ಪರ ಒಲವಿರುವ ಅಮೆರಿಕದ ರಾಜಕಾರಣಿಗಳು ಟ್ರಂಪ್‌ ಮೇಲೆ ತೀವ್ರ ಒತ್ತಡ ತಂದಿದ್ದರು.

ಜೆರುಸಲೇಂ ಅನ್ನು ಇಸ್ರೇಲ್‌ ರಾಜಧಾನಿ ಎಂದು ಮಾನ್ಯ ಮಾಡುವುದಾಗಿ ಅಧ್ಯಕ್ಷೀಯ ಚುನಾವಣೆ ವೇಳೆ ಟ್ರಂಪ್‌ ಭರವಸೆಯನ್ನೂ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.