ಮೆಕ್ಸಿಕೋ ಸಿಟಿ(ಐಎಎನ್ಎಸ್/ಇಎಫ್ಇ): ಈಶಾನ್ಯ ಮೆಕ್ಸಿಕೋದ ಟಮೌಲಿಪಾಸ್ನ ಜೈಲಿನಲ್ಲಿ ಶನಿವಾರ ಕೈದಿಗಳ ನಡುವೆ ನಡೆದ ಹೊಡೆದಾಟದಲ್ಲಿ 20 ಮಂದಿ ಮೃತಪಟ್ಟಿದ್ದು 12 ಮಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ ಇಬ್ಬರು ಕೈದಿಗಳ ನಡುವೆ ಜಗಳ ಆರಂಭವಾಗಿದ್ದು ನಂತರ ಇತರರು ಇದರಲ್ಲಿ ಭಾಗಿಯಾಗಿದ್ದು ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕ ರಕ್ಷಣಾ ಆಡಳಿತ ಕಚೇರಿ ಪ್ರಕಟಣೆ ತಿಳಿಸಿದೆ. ತಮ್ಮ ಎರಡು ಪ್ಯಾರಾದ ಪ್ರಕಟಣೆಯಲ್ಲಿ ಅಧಿಕಾರಿಗಳು ಹೆಚ್ಚಿನ ವಿವರಣೆ ನೀಡಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.