
ಪ್ರಜಾವಾಣಿ ವಾರ್ತೆವಾಷಿಂಗ್ಟನ್ (ಪಿಟಿಐ): ಅಮೆರಿಕದ ಉಪಾಧ್ಯಕ್ಷ ಜೋ ಬಿಡೆನ್ ಅವರ ಪುತ್ರ ಬಿಯು ಬಿಡೆನ್ (46) ಭಾನುವಾರ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
ಡೆಲಾವೇರ್‌ನ ಮಾಜಿ ಅಟಾರ್ನಿ ಜನರಲ್ ಆಗಿದ್ದ ಬಿಯು ಅವರು ಮಿದುಳು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈಚೆಗೆ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.