
ಪ್ರಜಾವಾಣಿ ವಾರ್ತೆ
ಇಸ್ತಾಂಬುಲ್ (ಪಿಟಿಐ): ಟರ್ಕಿಯಲ್ಲಿ ಸಂಭವಿಸಿದ ಪ್ರಬಲ ಕಾರ್ ಬಾಂಬ್ ಸ್ಫೋಟದಲ್ಲಿ ಐದು ಜನರು ಸಾವನ್ನಪ್ಪಿ, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ಸಿನಾರ್ ಪಟ್ಟಣದಲ್ಲಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು 5 ಸ್ಥಳದಲ್ಲೇ 5 ಜನರು ಮೃತಪಟ್ಟಿದ್ದಾರೆ. ಗಾಯಗೊಂಡ 39 ನಾಗರಿಕರನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟರ್ಕಿ ಪೊಲೀಸರು ತಿಳಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಪೊಲೀಸ್ ಠಾಣೆ ನೆಲಸಮವಾಗಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಲಾಗುತ್ತಿದೆ. ಕುರ್ದಿಶ್ ಉಗ್ರರು ಪೊಲೀಸ್ ಠಾಣೆಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದಾರೆ ಎಂದು ಟರ್ಕಿ ಪೊಲೀಸರು ಖಚಿತಪಡಿಸಿದ್ದಾರೆ.
ಟರ್ಕಿಯಲ್ಲಿ ಕುರ್ದಿಶ್ ವರ್ಕರ್ ಪಾರ್ಟಿ(ಪಿಕೆಕೆ)ಯ ತೀವ್ರವಾದಿಗಳು ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.