ADVERTISEMENT

ಟಿರ್ಕಿಯಲ್ಲಿ ಭೂಕಂಪ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2011, 19:30 IST
Last Updated 22 ಸೆಪ್ಟೆಂಬರ್ 2011, 19:30 IST

ಕಾರಾ, (ಎಎಫ್‌ಪಿ): ಟರ್ಕಿಯ ಪೂರ್ವ ಭಾಗದ ಎರ್ಜಿಂಕನ್  ಪ್ರಾಂತ್ಯದಲ್ಲಿ ಗುರುವಾರ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ. ಘಟನೆಯಿಂದ ಯಾವುದೇ ಆಸ್ತಿಪಾಸ್ತಿ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಆರಂಭಿಕ ಅವಲೋಕನದ ಪ್ರಕಾರ, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪ್ರಾಂತ್ಯದ ಗವರ್ನರ್ ಸಲ್ಮಾನ್ ಯೆನಿಗನ್ ಅವರು ಸರ್ಕಾರಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.6 ದಾಖಲಾಗಿದ್ದು, ಪಕ್ಕದ ಪ್ರಾಂತ್ಯದಲ್ಲಿಯೂ ಭೂಮಿ ಕಂಪಿಸಿದೆ ಎಂದು ಮೂಲಗಳು ತಿಳಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.