ADVERTISEMENT

ತೀಸ್ತಾ ಒಪ್ಪಂದ ಶೀಘ್ರ- ಹಸಿನಾ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2011, 19:30 IST
Last Updated 18 ಸೆಪ್ಟೆಂಬರ್ 2011, 19:30 IST

ಢಾಕಾ, (ಪಿಟಿಐ): ತೀಸ್ತಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ದೇಶವು ಭಾರತದ ಜತೆ ಶೀಘ್ರ ಒಪ್ಪಂದ ಮಾಡಿಕೊಳ್ಳಲಿದೆ ಎಂದು ತಿಳಿಸಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸಿನಾ ಅವರು, ಒಪ್ಪಂದಕ್ಕೆ ಯಾವಾಗ ಸಹಿ ಹಾಕಲಾಗುತ್ತದೆ ಎಂಬುದನ್ನು ತಿಳಿಸಿಲ್ಲ.

ನಿರ್ದಿಷ್ಟ ದಿನಾಂಕವನ್ನು ಹೇಳಲು ಸಾಧ್ಯವಿಲ್ಲ. ಆದರೆ ಶೀಘ್ರದಲ್ಲಿ ನಾವು ಒಪ್ಪಂದಕ್ಕೆ ಸಹಿ ಹಾಕುತ್ತೇವೆ ಎಂದು ಅವರು ಅವಾಮಿ ಪಕ್ಷದ ಪ್ರಮುಖ ಮುಖಂಡರಿಗೆ ತಿಳಿಸಿದ್ದಾರೆ.

ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಅವರು ಇತ್ತೀಚೆಗೆ ಢಾಕಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಒಪ್ಪಂದಕ್ಕೆ ಸಹಿ ಹಾಕುವ ಅವಕಾಶವಿತ್ತು. ಈ ಅವಕಾಶ ತಪ್ಪಿಹೋದ ಬಗ್ಗೆ ದೇಶದ ಜನತೆಗೆ ಬೇಸರವಿದೆ. ಆದರೆ ಹತಾಶರಾಗಬೇಕಿಲ್ಲ ಎಂದು ತಿಳಿಸಿದ್ದಾರೆ.

ತೀಸ್ತಾ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಎಲ್ಲಾ ಷರತ್ತುಗಳ ಬಗ್ಗೆ ಒಮ್ಮತ ಮೂಡಿತ್ತು. ಆದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದಕ್ಕೆ ಒಪ್ಪದ ಕಾರಣ ಒಪ್ಪಂದಕ್ಕೆ ಸಹಿ ಹಾಕುವ ದಿನಾಂಕ ಮುಂದಕ್ಕೆ ಹೋಗಿದೆ ಎಂದು ಪ್ರಧಾನಿ ಸಿಂಗ್ ತಿಳಿಸಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.