ವಾಷಿಂಗ್ಟನ್ (ಪಿಟಿಐ): ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ನಿರುಪಮಾ ರಾವ್ ಅವರು ಬುಧವಾರ ಇಲ್ಲಿನ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.
ದೆಹಲಿ ಹೈಕೋರ್ಟ್‌ನಲ್ಲಿ ನಡೆದ ಬಾಂಬ್ ಸ್ಫೋಟ ಮತ್ತು ದ್ವಿಪಕ್ಷೀಯ ಸಂಬಂಧ ಕುರಿತು ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.ಅಮೆರಿಕದ ಉಪ ವಿದೇಶಾಂಗ ಕಾರ್ಯದರ್ಶಿ ವಿಲಿಯಂ ಬರ್ನ್ಸ್, ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಮಾರಿಯಾ ಒಟೇರಿಯೋ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.