(ಕಠ್ಮಂಡು ) ಪಶ್ಚಿಮ ನೇಪಾಳದ ಕಿಸ್ಕಿ, ಗುಲ್ಮಿ, ಪರ್ಬತ್ ಹಾಗೂ ಬಾಗ್‌ಲುಂಗ್ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ ಭೂಕಂಪನದ ತೀವ್ರತೆ 4.4ರಷ್ಟಿತ್ತು. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.ಶನಿವಾರ ಬೆಳಿಗ್ಗೆಯೂ ಕೂಡಾ ಇದೇ ಪ್ರದೇಶಗಳಲ್ಲಿ ರಿಕ್ಟರ್ ಮಾಪನದಲ್ಲಿ 4.3ರ ತೀವ್ರತೆ ಹೊಂದಿದ್ದ ಭೂಕಂಪ ಸಂಭವಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.