ADVERTISEMENT

ನೈಜೀರಿಯಾ: ಕನೊಗೆ ಅಧ್ಯಕ್ಷರ ಭೇಟಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2012, 19:30 IST
Last Updated 23 ಜನವರಿ 2012, 19:30 IST

ಅಬುಜಾ (ಪಿಟಿಐ): ಒಬ್ಬ ಭಾರತೀಯ ಸೇರಿದಂತೆ 180 ಜನರ ಸಾವಿಗೆ ಕಾರಣವಾದ ಭಯೋತ್ಪಾದನಾ ದಾಳಿ ನಡೆದ ನೈಜೀರಿಯಾದ ಕನೊ ನಗರಕ್ಕೆ ರಾಷ್ಟ್ರದ ಅಧ್ಯಕ್ಷ ಗುಡ್‌ಲಕ್ ಜೊನಾಥನ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ಇಂತಹ ಘಟನೆಗಳು ನಡೆಯದಂತೆ ತಡೆಯಲು ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವುದಾಗಿಯೂ  ಘೋಷಿಸಿದರು.

ಏತನ್ಮಧ್ಯೆ, ನೈಜೀರಿಯಾದ ಅಧಿಕಾರಿಗಳು, ಧಾರ್ಮಿಕ ಮುಖಂಡರು ಮತ್ತು ರಾಜಕಾರಣಿಗಳು ಕನೊ ನಗರದಲ್ಲಿನ ಮಸೀದಿಯೊಂದರಲ್ಲಿ ಸೋಮವಾರ ಸೇರಿ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.