ADVERTISEMENT

ನೈತಿಕತೆ-ಪುರುಷರಿಗಿಂತ ಮಹಿಳೆಯರದೇ ಮೇಲುಗೈ: ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2012, 19:30 IST
Last Updated 16 ಏಪ್ರಿಲ್ 2012, 19:30 IST

ಲಂಡನ್ (ಪಿಟಿಐ): ಪುರುಷರಿಗಿಂತ ಮಹಿಳೆಯರೇ ಹೆಚ್ಚು ನೈತಿಕತೆ ಹೊಂದಿದ್ದಾರೆ ಎಂದು ಸಂಶೋಧನೆಯಿಂದ ಗೊತ್ತಾಗಿದೆ.

ಪ್ರಾಮಾಣಿಕತೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಮಹಿಳೆಯರಿಂದ ಬಂದ ಉತ್ತರಗಳ ಸಮೀಕ್ಷೆ ನಡೆಸಿದಾಗ ನೈತಿಕತೆ ವಿಚಾರದಲ್ಲಿ ಮಹಿಳೆಯರು ಹೆಚ್ಚಿನ ಗಮನ ಹರಿಸುತ್ತಾರೆ ಎಂಬ ಅಂಶ ಬೆಳಕಿಗೆ ಬಂದಿದೆ.
 
ಇತರರ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ಆಧಾರದ ಮೇಲೆ ಮಹಿಳೆಯರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.