ಇಸ್ಲಾಮಾಬಾದ್ (ಐಎಎನ್‌ಎಸ್): ಪಾಕಿಸ್ತಾನದ ಸ್ವಾತ್, ಗಜಾರ್, ಮಲಕಂದ್ ಹಾಗೂ ಬಾಲ್ಟಿಸ್ತಾನ್ ಪ್ರದೆಶಗಳಲ್ಲಿ ಬುಧವಾರ ನಸುಕಿನಲ್ಲಿ ಭೂ ಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.3ರಷ್ಟು ದಾಖಲಾಗಿದೆ. ಆಫ್ಘಾನಿಸ್ತಾನ ಮತ್ತು ಕಜಕಿಸ್ತಾನ ಗಡಿಭಾಗಗಲ್ಲಿ ಸ್ವಲ್ಪಮಟ್ಟಿಗೆ ಹಾನಿಯಾಗಿದ್ದು, ಹೆಚ್ಚಿನ ಸಾವು– ನೋವು ಕುರಿತು ಯಾವುದೇ ವರದಿಯಾಗಿಲ್ಲ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.