ADVERTISEMENT

ಪಾಕ್: ಹಿಂದೂ ವ್ಯಾಪಾರಿ ಕೊಲೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2011, 19:30 IST
Last Updated 5 ಸೆಪ್ಟೆಂಬರ್ 2011, 19:30 IST

ಇಸ್ಲಾಮಾಬಾದ್ (ಪಿಟಿಐ): ಬಲೂಚಿಸ್ತಾನ ಪ್ರಾಂತ್ಯದಲ್ಲಿ ಹಿಂದೂ ವ್ಯಾಪಾರಿಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.

`ದುಷ್ಕರ್ಮಿಗಳು ಹಣ ಸುಲಿಗೆ ಮಾಡುವ ಉದ್ದೇಶದಿಂದ ಈ ಕೊಲೆ ನಡೆಸಿದ್ದಾರೆ. ಮೃತ ವ್ಯಾಪಾರಿಯನ್ನು ಸೇಠ್ ಅದೊ ಮಲ್ ಎಂದು ಗುರುತಿಸಲಾಗಿದೆ. ಇವರು ಮಾಜಿ ನಗರಸಭೆ ಸದಸ್ಯರೂ ಆಗಿದ್ದರು.

ಹತ್ಯೆಯನ್ನು ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು ಕರಾಚಿ-ಕ್ವೆಟ್ಟಾ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು~ ಎಂದು `ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್~ ದಿನಪತ್ರಿಕೆ ವರದಿ ಮಾಡಿದೆ. 
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.