ADVERTISEMENT

ಪುನರಾಯ್ಕೆಗಾಗಿ ಜಿಂದಾಲ್ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2011, 19:30 IST
Last Updated 7 ಸೆಪ್ಟೆಂಬರ್ 2011, 19:30 IST

ವಾಷಿಂಗ್ಟನ್ (ಪಿಟಿಐ): ಅಮೆರಿಕದ ಲೂಸಿಯಾನಾ ರಾಜ್ಯದ ಗವರ್ನರ್ ಆಗಿರುವ ಭಾರತೀಯ ಮೂಲದ ಪಿಯೂಷ್ ಬಾಬಿ ಜಿಂದಾಲ್ ಅವರು ಮತ್ತೆ ಅದೇ ಕ್ಷೇತ್ರದಿಂದ ಎರಡನೇ ಬಾರಿಗೆ ಪುನರಾಯ್ಕೆಗಾಗಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

2007ರಲ್ಲಿ ನಡೆದ ಚುನಾವಣೆಯಲ್ಲಿ ಶೇ. 54.2ರಷ್ಟು ಮತ ಪಡೆದು ಲೂಸಿಯಾನಾ ರಾಜ್ಯದ ಗವರ್ನರ್ ಆಗಿ ಆಯ್ಕೆಯಾಗಿದ್ದರು.

ಬಾಬಿ ಅವರಿಗೆ ಪ್ರಬಲ ಪ್ರತಿಸ್ಪರ್ಧೆ ಇಲ್ಲ. ಹೀಗಾಗಿ ಎರಡನೇ ಸಲ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.