ADVERTISEMENT

ಪ್ರಬಲ ಸ್ಫೋಟಕ್ಕೆ 7 ಸಾವು; 66ಕ್ಕೂ ಹೆಚ್ಚು ಜನರಿಗೆ ಗಾಯ

ಏಜೆನ್ಸೀಸ್
Published 15 ಜೂನ್ 2017, 14:50 IST
Last Updated 15 ಜೂನ್ 2017, 14:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀಜಿಂಗ್: ಪೂರ್ವ ಚೀನಾದ ಜಿಯಾಂಗ್ಸು ಪ್ರಾಂತದ ಫೆಂಗ್‌ಕ್ಸಿಯಾನ್ ಕೌಂಟಿಯ ಶಾಲೆಯೊಂದರ ಮುಂಭಾಗದಲ್ಲಿ ಗುರುವಾರ ಸಂಜೆ ಸಂಭವಿಸಿದ ಪ್ರಬಲ ಸ್ಫೋಟಕ್ಕೆ 7 ಜನ ಮೃತಪಟ್ಟು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳು ಶಾಲೆ ಬಿಟ್ಟು ತೆರಳುವ ಸಮಯದಲ್ಲಿ, ಸಂಜೆ 4.50ರ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಸರ್ಕಾರಿ ಮಾಧ್ಯಮ ಕ್ಸಿನ್‌ಹುವಾ ವರದಿ ಮಾಡಿದೆ. ಇಬ್ಬರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದರೆ, ಐವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾಯಾಳುಗಳ ಪೈಕಿ 9 ಜನರ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರು ಮತ್ತು ಗಾಯಾಳುಗಳಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಎನ್ನಲಾಗಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಘಟನೆಗೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಆದಾಗ್ಯೂ, ಸ್ಫೋಟಗೊಂಡಿದ್ದು ಗ್ಯಾಸ್‌ ಸಿಲಿಂಡರ್ ಎಂದು ಗ್ಲೋಬಲ್ ಟೈಮ್ಸ್‌ ಮತ್ತು ಚೀನಾ ಯೂತ್ ಡೈಲಿ ಪತ್ರಿಕೆಗಳು ವರದಿ ಮಾಡಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.