ADVERTISEMENT

ಬಾಲಕಿ ರಕ್ಷಿಸಿದ ಬ್ರಿಟನ್ ಯುವರಾಜ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 19:30 IST
Last Updated 17 ಆಗಸ್ಟ್ 2012, 19:30 IST

ಲಂಡನ್: ಸಮುದ್ರದಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ಬ್ರಿಟನ್ ಯುವರಾಜ ವಿಲಿಯಮ್ಸ ಹೆಲಿಕಾಪ್ಟರ್ ಮೂಲಕ ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ...ಇದು ಯಾವುದೊ ಸಿನಿಮಾ ಕಥೆಯಲ್ಲ, ನೈಜ ಘಟನೆ.

ಇಲ್ಲಿನ ವೇಲ್ಸ್ ಸಮುದ್ರದಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ರಕ್ಷಿಸುವಂತೆ ಆಕೆಯ ಕುಟುಂಬದವರು ರಕ್ಷಣಾ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಕೂಡಲೇ ಯುವರಾಜ ವಿಲಿಯಮ್ಸ ಅಧಿಕಾರಿಗಳೊಂದಿಗೆ ಹೆಲಿಕಾಪ್ಟರ್‌ನಲ್ಲಿ ಸ್ಥಳಕ್ಕೆ ಧಾವಿಸಿ ಮುಳುಗುತ್ತಿದ್ದ ಬಾಲಕಿಯನ್ನು ರಕ್ಷಿಸಿದ್ದಾರೆ ಎಂದು `ಡೈಲಿ ಎಕ್ಸ್‌ಪ್ರೆಸ್~ ವರದಿ ಮಾಡಿದೆ.

ಬಾಲಕಿಯ ಕುಟುಂಬದವರು ಇಲ್ಲಿಗೆ ಪ್ರವಾಸಕ್ಕೆ ಬಂದ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಯುವರಾಜನ ರಕ್ಷಣಾ ಕಾರ್ಯಕ್ಕೆ ಬ್ರಿಟನ್‌ನಲ್ಲಿ ಬಹಳ ಮೆಚ್ಚುಗೆ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.