ADVERTISEMENT

ಬಾಲ ಕಾರ್ಮಿಕ ಪಟ್ಟಿ: ಭಾರತ ಪ್ರಥಮ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2011, 19:30 IST
Last Updated 4 ಅಕ್ಟೋಬರ್ 2011, 19:30 IST

ವಾಷಿಂಗ್ಟನ್, (ಎಎಫ್‌ಪಿ):  ಬಾಲ ಕಾರ್ಮಿಕರು ತಯಾರಿಸಿದ ವಸ್ತುಗಳ ಪಟ್ಟಿಯಲ್ಲಿ ಭಾರತ, ಬಾಂಗ್ಲಾದೇಶ ಮತ್ತು ಫಿಲಿಪ್ಪೀನ್ಸ್ ರಾಷ್ಟ್ರಗಳು ಮುಂಚೂಣಿಯಲ್ಲಿವೆ ಎಂದು ಅಮೆರಿಕ ಸರ್ಕಾರದ ಕಾರ್ಮಿಕ ಇಲಾಖೆಯ ವರದಿ ತಿಳಿಸಿದೆ.

ವರದಿಯಲ್ಲಿ ಹೇಳಿರುವಂತೆ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳೂತ್ತಿರುವ ರಾಷ್ಟ್ರಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದು ಬೀಡಿ, ಇಟ್ಟಿಗೆ, ಪಟಾಕಿ, ಚಪ್ಪಲಿ, ಗಾಜಿನ ಬಳೆ ಮುಂತಾದವು ಸೇರಿದಂತೆ ಸುಮಾರು 20 ವಸ್ತುಗಳ ತಯಾರಿಕೆಯಲ್ಲಿ ಬಾಲಕಾರ್ಮಿಕರನ್ನು ತೊಡಗಿಸಿಕೊಳ್ಳಲಾಗುತ್ತಿದೆ ಎಂದು ವರದಿ ತಿಳಿಸಿದೆ. 

ಸುಮಾರು 21.5 ಕೋಟಿಯಷ್ಟು ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿದ್ದಾರೆ ಎಂದು ಅಂತರ ರಾಷ್ಟ್ರೀಯ ಕಾರ್ಮಿಕ ಸಂಸ್ಥೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.