ADVERTISEMENT

ಬಿಜೆಪಿ ಗೆಲುವಿಗೆ ಎಎಪಿ ಅಡ್ಡಿ’

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2014, 19:30 IST
Last Updated 10 ಮಾರ್ಚ್ 2014, 19:30 IST

ಇಸ್ಲಾಮಾಬಾದ್‌ (ಐಎಎನ್‌ಎಸ್‌): ದೆಹಲಿಯಲ್ಲಿ ಯಶಸ್ವಿ­ಯಾಗಿರುವ ಆಮ್‌  ಆದ್ಮಿ ಪಕ್ಷ ಮುಂಬರುವ ಲೋಕಸಭೆ ಚುನಾವಣೆ­ಯಲ್ಲಿ ಬಿಜೆಪಿ ಗೆಲುವಿಗೆ ಮುಖ್ಯ ಅಡ್ಡಿಯಾಗಲಿದೆ ಎಂದು ಪಾಕಿಸ್ತಾನದ ದಿನಪತ್ರಿಕೆಯೊಂದು ಅಭಿಪ್ರಾಯಪಟ್ಟಿದೆ.

ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಗುರುತಿಸಿಕೊಂಡಿರುವ ಆಮ್‌ ಆದ್ಮಿ ಪಕ್ಷ ನಗರ ಪ್ರದೇಶದ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ ಇದು ಬಿಜೆಪಿ ಗೆಲುವಿಗೆ ತಡೆಯಾಗಬಹುದು ಎಂದು ಪಾಕಿಸ್ತಾನದ ಪ್ರಮುಖ ಪತ್ರಿಕೆ ‘ನ್ಯೂಸ್‌ ಇಂಟರ್‌ನ್ಯಾಷನಲ್‌’ ತನ್ನ ಸಂಪಾದಕೀಯದಲ್ಲಿ ಬರೆದಿದೆ.

ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಕಾಂಗ್ರೆಸ್‌ ಚುನಾವಣೆಯಲ್ಲಿ ಸೋಲನ್ನು ಅನುಭವಿಸುವ ನಿರೀಕ್ಷೆ ಇದೆ ಎಂದು ಪತ್ರಿಕೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.