ಲಂಡನ್ (ಪಿಟಿಐ): ನಿವೃತ್ತ ಲೆ. ಜನರಲ್ ಕೆ.ಎಸ್. ಬ್ರಾರ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ ಪೊಲೀಸರು ನಾಲ್ವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.
ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಲಂಡನ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಬ್ರಾರ್ ಅವರು ಲಂಡನ್ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಸೆಪ್ಟೆಂಬರ್ 30 ರಂದು ಅಪರಿಚಿತ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.