ADVERTISEMENT

ಭಗವದ್ಗೀತೆ: ಮೇಲ್ಮನವಿಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2012, 19:30 IST
Last Updated 26 ಜನವರಿ 2012, 19:30 IST

ಮಾಸ್ಕೊ (ಪಿಟಿಐ): ಭಗವದ್ಗೀತೆಯನ್ನು ರಷ್ಯಾ ಭಾಷೆಗೆ ಭಾಷಾಂತರಿಸುವುದನ್ನು ನಿಷೇಧಿಸುವಂತೆ  ಕೋರಿದ್ದ ಮನವಿಯನ್ನು ಸೈಬೀರಿಯನ್ ಕೋರ್ಟ್ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ವಕೀಲರು ಸಿದ್ಧತೆ ನಡೆಸಿದ್ದಾರೆ.

ಆದರೆ ನ್ಯಾಯಾಲಯದ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಜ.25ಕ್ಕೆ ಅಂತಿಮ ದಿನವಾಗಿತ್ತು. ಹೀಗಾಗಿ ಅವಧಿ ಮುಕ್ತಾಯವಾಗಿದೆ ಎಂದು ರಷ್ಯಾದ ಹಿಂದು ಕೌನ್ಸಿಲ್ ಅಧ್ಯಕ್ಷ ಮತ್ತು ಮಾಸ್ಕೊ ಇಸ್ಕಾನ್‌ನ ಸಾಧು ಪ್ರಿಯ ದಾಸ್ ತಿಳಿಸಿದ್ದಾರೆ.

ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅರ್ಜಿದಾರರಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.