
ಪ್ರಜಾವಾಣಿ ವಾರ್ತೆವಾಷಿಂಗ್ಟನ್ (ಪಿಟಿಐ): ದೇಶದ ಯುವಜನತೆಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಜಾರಿಗೆ ತರಲು ಉದ್ದೇಶಿಸಿರುವ ಮಾಧ್ಯಮಿಕ ಶಿಕ್ಷಣ ಯೋಜನೆ ಅನುಷ್ಠಾನಕ್ಕೆ ವಿಶ್ವಬ್ಯಾಂಕ್ ಭಾರತಕ್ಕೆ 50 ದಶಲಕ್ಷ ಡಾಲರ್ ಸಾಲ ನೀಡಲು ಶನಿವಾರ ಒಪ್ಪಿಗೆ ನೀಡಿದೆ.
ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ ಕಾರ್ಯಕ್ರಮದಡಿ ವಿವಿಧ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ ಸರ್ಕಾರವು 12.9 ಶತಕೋಟಿ ಡಾಲರ್ ವೆಚ್ಚ ಮಾಡುವ ಗುರಿ ಹೊಂದಿದೆ.
ವಿಶ್ವಬ್ಯಾಂಕ್‌ನ ಅಂಗಸಂಸ್ಥೆಯಾಗಿರುವ ಅಂತರ ರಾಷ್ಟ್ರೀಯ ಅಭಿವೃದ್ಧಿ ಸಂಘದಿಂದ ಈ ಯೋಜನೆಗೆ ಸಾಲ ನೀಡಲಾಗುತ್ತಿದ್ದು, ಬಡ್ಡಿ ರಹಿತ ಈ ಸಾಲವನ್ನು ತೀರಿಸಲು 25 ವರ್ಷಗಳ ಕಾಲಾವಕಾಶ ನೀಡಲಾಗಿದೆ. ಅಲ್ಲದೇ 5 ವರ್ಷ ಹೆಚ್ಚುವರಿ ಕಾಲಾವಕಾಶ ಕಲ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.