
ಪ್ರಜಾವಾಣಿ ವಾರ್ತೆಇಸ್ಲಾಮಾಬಾದ್ (ಐಎಎನ್‌ಎಸ್): ಉಪ ಖಂಡದಲ್ಲಿ ಭಾರತದ ಅಧಿಪತ್ಯವನ್ನು ಪಾಕಿಸ್ತಾನ ಎಂದಿಗೂ ಅಂಗೀಕರಿಸುವುದಿಲ್ಲ ಎಂದು ಪಾಕಿಸ್ತಾನದ ಭದ್ರತಾ ಸಲಹೆಗಾರ ಸರ್‌ತಾಜ್ ಅಜಿಜ್ ತಿಳಿಸಿದ್ದಾರೆ.
ಪಾಕಿಸ್ತಾನ ಪರಮಾಣು ಶಕ್ತಿಯಲ್ಲಿ ಸ್ವಾವಲಂಬನೆ ಸಾಧಿಸಿರುವುದರಿಂದ ಭಾರತದ ಕನಸು ನುಚ್ಚು ನೂರಾಗಿದೆ ಎಂದರು.
ಲಾಹೋರ್‌ನಲ್ಲಿರುವ ನಜಾರಿಯಾ ಸಂಶೋಧನಾ ಕೇಂದ್ರದಲ್ಲಿ ಅವರು ಮಾತನಾಡುತ್ತಿದ್ದರು. ಭಾರತ 1998 ರಲ್ಲಿ ಅಣ್ವಸ್ತ್ರ ಪ್ರಯೋಗ ನಡೆಸಿದ ಬೆನ್ನಲ್ಲೇ. ಪಾಕಿಸ್ತಾನ ಸಹ ಅಣ್ವಸ್ತ್ರ ಪ್ರಯೋಗ ನಡೆಸಿತು ಎಂದರು.
ಪಾಕಿಸ್ತಾನದ ರಕ್ಷಣಾ ವ್ಯವಸ್ಥೆಯನ್ನು ನಾವು ಮತ್ತಷ್ಟು ಬಲಪಡಿಸಬೇಕು. ಈ ನಿಟ್ಟಿನಲ್ಲಿ ತಾಂತ್ರಿಕ ವಿದ್ಯಾರ್ಥಿಗಳು ಸಂಶೋಧನೆ ನಡೆಸಬೇಕು ಎಂದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.