ADVERTISEMENT

ಭಾರತ–ಪಾಕಿಸ್ತಾನ ಬಾಂಧವ್ಯ ವೃದ್ಧಿಗೆ ನೆರವು ನೀಡಲು ಚೀನಾ ಒಲವು

ಏಜೆನ್ಸೀಸ್
Published 12 ಜುಲೈ 2017, 11:13 IST
Last Updated 12 ಜುಲೈ 2017, 11:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀಜಿಂಗ್: ಭಾರತ ಮತ್ತು ಪಾಕಿಸ್ತಾನದ ನಡುವಣ ಬಾಂಧವ್ಯ ವೃದ್ಧಿಗೆ ನೆರವು ನೀಡಲು ಸಿದ್ಧವಿರುವುದಾಗಿ ಚೀನಾ ಹೇಳಿದೆ.

‘ಕಾಶ್ಮೀರ ಸಮಸ್ಯೆಯು ವಿಶ್ವ ಸಮುದಾಯದ ಗಮನ ಸೆಳೆದಿದೆ. ಭಾರತ ಮತ್ತು ಪಾಕಿಸ್ತಾನ ದಕ್ಷಿಣ ಏಷ್ಯಾದಲ್ಲಿ ಪ್ರಮುಖ ಸ್ಥಾನ ಪಡೆದಿವೆ. ಹೀಗಾಗಿ ಗಡಿ ನಿಯಂತ್ರಣ ರೇಖೆ ಬಳಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಆ ರಾಷ್ಟ್ರಗಳ ಮೇಲೆ ಮಾತ್ರವಲ್ಲದೆ, ದಕ್ಷಿಣ ಏಷ್ಯಾದ ಮೇಲೆಯೇ ಪರಿಣಾಮ ಬೀರಿದೆ’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್ ಶಾಂಗ್ ಹೇಳಿದ್ದಾರೆ. ಜತೆಗೆ, ಕಾಶ್ಮೀರ ವಿಚಾರದಲ್ಲಿ ರಚನಾತ್ಮಕ ಕಾರ್ಯ ನಿರ್ವಹಿಸಲು ಚೀನಾ ಒಲವು ಹೊಂದಿರುವುದಾಗಿ ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆ ಬಳಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಬಗ್ಗೆ ಪಾಕಿಸ್ತಾನದ ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಾಂಗ್ ಈ ರೀತಿ ಉತ್ತರಿಸಿದ್ದಾರೆ. ಆದರೆ, ಅಮರನಾಥ ಯಾತ್ರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಅವರು ಪ್ರಸ್ತಾವಿಸಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.