ADVERTISEMENT

ಭಾರತೀಯ ಮೂಲದ ಮಹಿಳೆಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2012, 19:30 IST
Last Updated 15 ಫೆಬ್ರುವರಿ 2012, 19:30 IST

ವಾಷಿಂಗ್ಟನ್ (ಪಿಟಿಐ): ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರ ಚುನಾವಣಾ ಖರ್ಚಿಗಾಗಿ ದೇಣಿಗೆ ಸಂಗ್ರಹಿಸುತ್ತಿರುವ ಭಾರತೀಯ ಮೂಲದ ಅಮೆರಿಕದ ಶೆಫಾಲಿ ರಾಜ್‌ಧನ್ ದುಗ್ಗಲ್ ಅವರಿಗೆ `ಕ್ಯಾಲಿಫೋರ್ನಿಯಾದ ಅತ್ಯಂತ ಪ್ರಭಾವಶಾಲಿ ಮಹಿಳೆ~ ಎಂಬ ಪ್ರಶಸ್ತಿ ಲಭಿಸಿದೆ.

40 ವರ್ಷದ ಶೆಫಾಲಿ ಅವರು ಒಬಾಮ ಅಧ್ಯಕ್ಷತೆಯ ರಾಷ್ಟ್ರೀಯ ಹಣಕಾಸು ಸಮಿತಿಯಲ್ಲಿ ಸದಸ್ಯರಾಗಿದ್ದು, ಅವರ ನಾಯಕತ್ವ ಗುಣವನ್ನು ಗುರುತಿಸಿ ಕಳೆದ ವಾರ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.