ನವದೆಹಲಿ (ಪಿಟಿಐ): ‘ಆಸ್ಟ್ರೇಲಿಯಾದ ಮೆಲ್ಬೋರ್ನ್‌ದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ಹತ್ಯೆ ಮಾಡಿರುವುದು ದುರದೃಷ್ಟಕರ ಸಂಗತಿ’ ಎಂದು ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಸೋಮವಾರ ಇಲ್ಲಿ ಸಂಸತ್ತಿನ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಅವರು, ಆಸ್ಟ್ರೇಲಿಯಾದಲ್ಲಿ ನಡೆದ ಈ ಘಟನೆಯ ಬಗ್ಗೆ ತಮ್ಮ ವಿಷಾದ ವ್ಯಕ್ತಪಡಿಸಿದರು.
‘ಪ್ರಕರಣದ ತನಿಖೆಯಲ್ಲಿನ ಪ್ರಗತಿಯ ಬಗ್ಗೆ ಸರ್ಕಾರವು ನಿಗಾ ಇಟ್ಟಿದೆ. ಜೊತೆಗೆ ಅಲ್ಲಿನ ಭಾರತೀಯ ರಾಯಭಾರ ಕಚೇರಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯನ್ನು ಪಡೆಯಲಾಗುವುದು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ ಎಂದರು.
ಭಾರತೀಯ ಮೂಲದ ವಿದ್ಯಾರ್ಥಿನಿ ತುಷಾ ಠಕ್ಕರ (24) ಯವತಿಯನ್ನು ಅತ್ಯಾಚಾರವೆಸಗಿ, ಹತ್ಯೆಗೈದು ಮೆಲ್ಬೋರ್ನ್‌ನ ಮೆಡ್ವಾ ಬ್ಯಾಂಕ್ ಪಾರ್ಕ್ ಬಳಿಯ ನೀರಿನ ಕಾಲುವೆ ಬಳಿ ಸೂಟ್‌ಕೇಸ್‌ನಲ್ಲಿ ಬಚ್ಚಿಟ್ಟಿದ್ದು ಕಳೆದ ಶುಕ್ರವಾರ ಪತ್ತೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.